ಕರ್ನಾಟಕ ರಾಜ್ಯ ಸಾಕ್ಷರತಾ ಮಿಷನ್ ಪ್ರಾಧಿಕಾರವು ಒಂದು ಸ್ವಾಯತ್ತ ಸಂಸ್ಥೆಯಾಗಿದ್ದು, ರಾಜ್ಯದಲ್ಲಿ ಸಾಕ್ಷರತಾ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಸಲುವಾಗಿ ರಾಜ್ಯ ಸರ್ಕಾರದಿಂದ ಸ್ಥಾಪನೆಯಾಗಿದ್ದು, ದಿನಾಂಕ 18.03.1995 ರಿಂದ ಕಾರ್ಯನಿರ್ವಹಿಸುತ್ತಿದೆ. ಲೋಕ ಶಿಕ್ಷಣ ಇಲಾಖೆಯು ಕರ್ನಾಟಕ ರಾಜ್ಯ ಸಾಕ್ಷರತಾ ಮಿಷನ್ ಪ್ರಾಧಿಕಾರದ ಸಚಿವಾಲಯವಾಗಿ ಕರ್ತವ್ಯ ನಿರ್ವಹಿಸುತ್ತಿದೆ. ಲೋಕ ಶಿಕ್ಷಣ ಇಲಾಖೆಯ ನಿರ್ದೇಶಕರು ಈ ಸಂಸ್ಥೆಯ ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ. |